alex Certify ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬಳ್ಳಾರಿ: ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರನ್ನು ಗಾಂಧಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲರ್ ಜೆರಾಕ್ಸ್ ಪ್ರಿಂಟರ್, ನೂರು ರೂಪಾಯಿ ಮುಖಬೆಲೆಯ 80 ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಬಳ್ಳಾರಿ ನಗರದ ಬಿಸಿಲಹಳ್ಳಿ ಹರೀಶ್ ಮತ್ತು ಅಶೋಕ್ ಎಂದು ಗುರುತಿಸಲಾಗಿದೆ. ಬ್ಯಾಂಕ್ ಆಫ್ ಬರೋಡದಲ್ಲಿ ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಬ್ಯಾಂಕಿನಲ್ಲಿ ನೋಟು ಚಲಾವಣೆಯ ವಹಿವಾಟು ಅರಿತುಕೊಂಡಿದ್ದ. ಹರೀಶನೊಂದಿಗೆ ಸೇರಿ ನೋಟುಗಳನ್ನು ಪ್ರಿಂಟ್ ಮಾಡಲು ಮುಂದಾಗಿದ್ದ. ಇಬ್ಬರು ಸೇರಿಕೊಂಡು ಬಳ್ಳಾರಿಯ ಕೋಲಾಚಲಂ ಕಾಂಪೌಂಡ್ ನಲ್ಲಿರುವ ಮೋಹನ್ ಲಾಡ್ಜ್ ನಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದರು.

ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಪಿಐ ಸಿದ್ದರಾಮೇಶ್ವರ, ಪಿಎಸ್ಐ ಸೌಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ನಕಲಿ ನೋಟುಗಳನ್ನು ಎಲ್ಲಿಯೂ ಚಲಾವಣೆ ಮಾಡಿಲ್ಲ ಎನ್ನುವುದು ಗೊತ್ತಾಗಿದೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...