ಬೆಂಗಳೂರು: ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎ ಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸುರೇಶ್ ಕುಮಾರ್, ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಸಿಸಿಬಿಗೆ ಬದಲಾಗಿ ಸಿಬಿಐ ಅಥವಾ ಎನ್ಐಎ ತನಿಖೆಗೆ ವಹಿಸಬೇಕು. ರಾಷ್ಟ್ರೀಯ ಭದ್ರತೆ ವಿರುದ್ಧವಾಗಿ ಕೆಲಸ ಮಾಡಲಾಗಿದೆ ಎಂದು ಹೇಳಿದರು.
ಸಚಿವ ಭೈರತಿ ಸುರೇಶ್ ತನ್ನ ಗೆಲುವಿಗಾಗಿ ಈ ಕೃತ್ಯ ಮಾಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಾವು ದೂರು ನೀಡುತ್ತೇವೆ. ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಪ್ರಕರಣದಲ್ಲಿ ಸಚಿವ ಭೈರತಿ ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಆರೋಪ ಕೇಳಿಬಂದಿರುವ ಎಂಎಸ್ ಎಲ್ ಟೆಕ್ನೋ ಸಂಸ್ಥೆ ಮುದ್ರಿಸಿರುವ ಆಧಾರ್ ಕಾರ್ಡ್ ಗಳನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.