ಚಾಮರಾಜನಗರ : ಪಾಪಿ ಅಣ್ಣನೋರ್ವ ತಂಗಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ.
ಫರ್ಮನ್ ಪಾಷಾ ಎಂಬಾತ ತಂಗಿ ಐಮನ್ ಬಾನುಳನನ್ನು ಕತ್ತು ಕೊಯ್ದು ಕೊಲೆ ಮಾಡಿ ತಂದೆ ಹಾಗೂ ಅತ್ತಿಗೆ ಮೇಲೂ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಕೌಟುಂಬಿಕ ಕಲಹದಿಂದ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.