ನವದೆಹಲಿ: ಸರ್ಕಾರಿ, ಖಾಸಗಿ ನೌಕರರ ಕುಟುಂಬಕ್ಕೂ ಕೋವಿಡ್ ಲಸಿಕೆ ನೀಡುವ ಕುರಿತಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಸರ್ಕಾರಿ ಮತ್ತು ಖಾಸಗಿ ನೌಕರರ ಕುಟುಂಬ ಸದಸ್ಯರು ಕಚೇರಿ ವತಿಯಿಂದ ನಡೆಸಲಾಗುವ ಲಸಿಕೆ ಶಿಬಿರಗಳಲ್ಲಿ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಗಳಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಈ ಮೊದಲು ಉದ್ಯೋಗಿಗಳಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಬಂಧಕ್ಕೆ ಉದ್ಯಮ ವಲಯದ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಉದ್ಯೋಗಿಗಳಿಗೆ ಮಾತ್ರ ಲಸಿಕೆ ನೀಡುವುದರಿಂದ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದು, ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರಿ ನೌಕರರ ಕುಟುಂಬದವರು, ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಕುಟುಂಬದವರು ಕೂಡ ಲಸಿಕೆ ಪಡೆಯಬಹುದು. ನೌಕರರ ತಂದೆ, ತಾಯಿ, ಪತ್ನಿ, ಮಕ್ಕಳು ಲಸಿಕೆ ಪಡೆಯಬಹುದು ಎಂದು ಹೇಳಲಾಗಿದೆ.