ಶಿವಮೊಗ್ಗ: ತಾಲೂಕಿನ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಕುಂಸಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್, ಶಿವಮೊಗ್ಗ ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲಿ ಸಭೆ ನಡೆಸಿದ್ದಾರೆ. ಬಹಿಷ್ಕಾರದಂತಹ ಘಟನೆಗಳು ಮರುಕಳಿಸದಂತೆ ಜನರಿಗೆ ತಿಳಿವಳಿಕೆ ನೀಡಿ ಜಾಗೃತಿ ಮೂಡಿಸಿದ್ದಾರೆ.