alex Certify ದಯಾ ಮರಣಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ಕೇರಳದ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಯಾ ಮರಣಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ಕೇರಳದ ಕುಟುಂಬ

ಕೇರಳದ ಕೊಟ್ಟಾಯಂನಲ್ಲಿರುವ ಕುಟುಂಬವೊಂದು ತಮ್ಮ ಕುಟುಂಬದ ಎಲ್ಲಾ ಐವರು ಸದಸ್ಯರ ದಯಾ ಮರಣಕ್ಕೆ ಅನುಮತಿ ಕೋರಿ ಭಾರತದ ಸರ್ವೋಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಅಪರೂಪದ ಜನ್ಮಜಾತ ಕಾಯಿಲೆಯಿಂದ ಬಳಲುತ್ತಿರುವ ತಮ್ಮ ಇಬ್ಬರು ಮಕ್ಕಳಿಗೆ ಚಿಕಿತ್ಸೆ ಮುಂದುವರಿಸುವ ಪ್ರಯತ್ನ ವಿಫಲವಾಗಿದೆ ಎಂದು ಕುಟುಂಬದವರು ಹೇಳಿಕೊಂಡಿದ್ದಾರೆ.

ಕೊಟ್ಟಾಯಂ ಜಿಲ್ಲೆಯ ಕೊಝುವನಾಲ್‌ನ ಸ್ಮಿತಾ ಆಂಟೋನಿ ಮತ್ತು ಮನು ಜೋಸೆಫ್ ದಂಪತಿಗಳು, ಸಾಲ್ಟ್-ವೇಸ್ಟಿಂಗ್ ಜನ್ಮಜಾತ ಮೂತ್ರಜನಕಾಂಗದ ಹೈಪರ್‌ಪ್ಲಾಸಿಯಾ(SWCAH) ನಿಂದ ಬಳಲುತ್ತಿರುವ ತಮ್ಮ ಮೂವರು ಮಕ್ಕಳಲ್ಲಿ ಇಬ್ಬರಿಗೆ ಚಿಕಿತ್ಸೆಯನ್ನು ಮುಂದುವರಿಸಲು ಯಾವುದೇ ಮಾರ್ಗವನ್ನು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ತಾನು ಮತ್ತು ತನ್ನ ಪತಿ ವೃತ್ತಿಯಲ್ಲಿ ನರ್ಸ್‌ಗಳಾಗಿದ್ದರೂ, ಮಕ್ಕಳಿಗೆ ಪೂರ್ಣ ಸಮಯದ ಆರೈಕೆಯ ಅಗತ್ಯವಿರುವುದರಿಂದ ಅವರು ಕೆಲಸಕ್ಕೆ ಹೋಗಲು ಸಾಧ್ಯವಾಗಲಿಲ್ಲ ಎಂದು ಸ್ಮಿತಾ ಹೇಳಿದ್ದಾರೆ.

ಕೊಟ್ಟಾಯಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಮಿತಾ, ತಮ್ಮ ಮಕ್ಕಳ ಚಿಕಿತ್ಸೆಯ ವೆಚ್ಚವನ್ನು ಪೂರೈಸಲು ಈಗಾಗಲೇ ತಮ್ಮ ಆಸ್ತಿಯನ್ನು ಮಾರಾಟ ಮಾಡಿದ್ದು, ಕೆಲವು ಆಸ್ತಿ ಒತ್ತೆ ಇಟ್ಟಿದ್ದಾರೆ.

ನಮ್ಮ ದೈನಂದಿನ ಖರ್ಚಿಗೆ, ಕಿರಿಯ ಮಕ್ಕಳ ಚಿಕಿತ್ಸೆಗೆ ಮತ್ತು ಹಿರಿಯ ಮಗುವಿನ ಶಿಕ್ಷಣಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ. ಆದಾಯವಿಲ್ಲದ ಕಾರಣ ಜೀವನವನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕೆಲಸ ಮತ್ತು ಚಿಕಿತ್ಸೆಗೆ ನೆರವು ನೀಡುವಂತೆ ಸ್ಥಳೀಯ ಪಂಚಾಯತ್‌ಗೆ ಮನವಿ ಮಾಡಿದರೂ ಯಾವುದೇ ಬೆಂಬಲ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಆದ್ದರಿಂದ, ನಮ್ಮ ಕುಟುಂಬಕ್ಕೆ ಈಗ ದಯಾ ಹತ್ಯೆಗೆ ವಿನಂತಿಸುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ. ನಾವು ಈಗ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿದ್ದೇವೆ. ಕುಟುಂಬವು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...