
ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ಬೀರಡಿಯ ಸಾತಪ್ಪ ಸುತಾರ(60), ಮಹಾದೇವಿ(50) ಮಕ್ಕಳಾದ ದತ್ತಾತ್ರೇಯ(28) ಮತ್ತು ಸಂತೋಷ(25) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.