ಕೋಲ್ಕತಾ : ಕಳೆದ ತಿಂಗಳಿನಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಪ್ರಾಸ್ಟೇಟ್ ಕ್ಯಾನ್ಸರ್ನಿಂದ ಬಳಲುತ್ತಿರುವ ಅವರು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ.
ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಗಾಯಕ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ, ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.