ಖ್ಯಾತ ಕ್ರಿಕೆಟಿಗ ಭಾರತ ತಂಡದ ವಿಕೆಟ್ ಕೀಪರ್ ಆಗಿದ್ದ ಸಯ್ಯದ್ ಕಿರ್ಮಾನಿ ತಮ್ಮ ಆತ್ಮಕಥೆ ಕುರಿತು ಪುಸ್ತಕ ಬರೆದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಕಿರ್ಮಾನಿಯವರು ತಮ್ಮ ಆತ್ಮಕಥೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ಈ ಕುರಿತು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿರುವ ಕರ್ನಾಟಕ ಕಾಂಗ್ರೆಸ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಅವರು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರರಾದ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು ಎಂದು ತಿಳಿಸಿದೆ.
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ @DKShivakumar ಅವರನ್ನು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಅವರು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರರಾದ ಪ್ರಕಾಶ್ ರಾಥೋಡ್… pic.twitter.com/o9FLikzxf3
— Karnataka Congress (@INCKarnataka) December 3, 2024