ಬೆಂಗಳೂರು : ಖ್ಯಾತ ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.