ಬಾಗಲಕೋಟೆ : ಖ್ಯಾತ ರಂಗಭೂಮಿ ಕಲಾವಿದೆ ‘ಮಮತಾ ಗುಡೂರ’ (75) ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮನೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗ್ಗೆ 7 ಗಂಟೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟು 5 ಸಾವಿರಕ್ಕೂ ಹೆಚ್ಚು ನಾಟಕ ಹಾಗೂ 25 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಮತಾ ಬಣ್ಣ ಹಚ್ಚಿದ್ದರು. ಕನ್ನಡದ ಹಲವು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದರು. ಇವರ ಕಲಾಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕೂಡ ನೀಡಲಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರು ಗ್ರಾಮದಲ್ಲಿ ಮುಸ್ಲಿಂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.