ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದು, ನೆಚ್ಚಿನ ಆಟಗಾರನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ವಿರಾಟ್ ಕೊಹ್ಲಿ ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಟೀಮ್ ಇಂಡಿಯಾ ವಿಶ್ವಕಪ್ 2023 ರ ಲೀಗ್ ಹಂತದ ಕೊನೆಯ ಪಂದ್ಯವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ನಡೆಯಲಿದೆ.
ಐಸಿಸಿ ವಿಶ್ವಕಪ್ 2023 ರ 37 ನೇ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 243 ರನ್ಗಳಿಂದ ಸೋಲಿಸಿತು. ಭಾರತ 8 ಪಂದ್ಯಗಳಲ್ಲಿ ಸತತ 8 ಗೆಲುವು ಸಾಧಿಸಿದೆ. ಪ್ರಸ್ತುತ, ಪಾಯಿಂಟ್ಗಳು ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ತಲುಪಿವೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 83 ರನ್ಗಳಿಗೆ ಆಲೌಟ್ ಆಯಿತು.