ಮರಾಠ ಅಭಿವೃದ್ಧಿ ನಿಗಮ ರದ್ದುಪಡಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ನಾಳೆ ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಅನೇಕ ಸಂಘಟನೆಗಳು ಬೆಂಬಲಿಸಿವೆ. ಮತ್ತೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಕರ್ನಾಟಕ ಬಂದ್ ಮಾಡದಂತೆ ಸಿಎಂ ಮನವಿ ಮಾಡಿದ್ದಾರೆ.
ಇನ್ನು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ಕೈಗೊಂಡ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ರೈತ ಮುಖಂಡರು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಹರವಿಂದರ್ ಸಿಂಗ್ ಲಡಾಖ್ ವಾಲ್ ಅವರು ಸಿಂಘು ಬಾರ್ಡರ್ ನಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಬಂದ್ ಗೆ ಕರೆ ನೀಡಿದ್ದಾರೆ.
ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಮಾತನಾಡಿ, ಹೋರಾಟವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಬೇಕಿದೆ. ಈ ನಿಟ್ಟಿನಲ್ಲಿ ಭಾರತ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನಾಳೆ ಕೇಂದ್ರ ಸರ್ಕಾರದೊಂದಿಗೆ ಸಭೆ ನಡೆಸಲಾಗುವುದು. ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ಒಪ್ಪದಿದ್ದರೆ ಹೊಸ ಕೃಷಿ ಕಾನೂನುಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಮತ್ತೊಬ್ಬ ರೈತನಾಯಕ ಗುರ್ನಮ್ ಸಿಂಗ್ ಚಡೋನಿ ತಿಳಿಸಿದ್ದಾರೆ.