ಬೆಂಗಳೂರು: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಲಭ್ಯ ದತ್ತಾಂಶ ಆಧರಿಸಿ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಕೃಷಿ ವಿವಿ ಆಭರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಿಲ್ಲ. ಕೃಷಿ ಇಲಾಖೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಸರ್ಕಾರದ ಬಳಿ ಲಭ್ಯವಿರುವ ಕಿಸಾನ್ ಸಮ್ಮಾನ್ ನಿಧಿ ದತ್ತಾಂಶ ಆಧರಿಸಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಅನುದಾನ ಜಮಾ ಮಾಡಲಿದೆ ಎಂದು ಹೇಳಿದ್ದಾರೆ.
ರೈತ ಶಕ್ತಿ ಯೋಜನೆ ಅಡಿ ರೈತರಿಗೆ ಪ್ರತಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ ಐದು ಎಕರೆಗೆ ಡೀಸೆಲ್ ಸಹಾಯಧನ ನೀಡಲು ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.