
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ ನಿವಾಸಿಯಾಗಿರುವ ಮಂಜುನಾಥ್ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.