ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತವಾಗಿ ಸಾಲ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ‘ಪ್ರಜಾ ಧ್ವನಿ’ ಅಭಿಯಾನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ.
ಪ್ರಧಾನಿ ಮೋದಿ ದೇಶ ಕಂಡ ಅತ್ಯಂತ ವಚನಭ್ರಷ್ಟ ಪ್ರಧಾನಿಯಾಗಿದ್ದಾರೆ. ಅವರು ಹೇಳಿದ ಸುಳ್ಳುಗಳನ್ನು ರಾಜ್ಯದ ಬಿಜೆಪಿ ನಾಯಕರು ಪುನರುಚ್ಚರಿಸುತ್ತಾರೆ ಎಂದು ಟೀಕಿಸಿದ ಸಿದ್ದರಾಮಯ್ಯ, ರೈತರ ಆದಾಯ ದ್ವಿಗುಣಗೊಳಿಸುವ ಬಿಜೆಪಿಯ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.