
ನವದೆಹಲಿ: ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಿರೋಧಿಸಿ ಕಳೆದ 4 ತಿಂಗಳಿಂದ ಹೋರಾಟ ಕೈಗೊಂಡಿರುವ ರೈತರು ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮಾರ್ಚ್ 26 ರಂದು ರಾಷ್ಟ್ರವ್ಯಾಪಿ ಸಂಪೂರ್ಣ ಬಂದ್ ಗೆ ಕರೆ ನೀಡಿದ್ದಾರೆ.
ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ರೈತ ಸಂಘಟನೆಗಳ ಪದಾಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಾರ್ಚ್ 15 ರಂದು ರೈತ ಸಂಘಟನೆ, ಕಾರ್ಮಿಕ ಸಂಘಟನೆಗಳಿಂದ ಖಾಸಗೀಕರಣ ಮತ್ತು ಇಂಧನ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪದಾಧಿಕಾರಿಗಳು ಹೇಳಿದ್ದಾರೆ.
ಮಾರ್ಚ್ 26 ರಂದು ಹೋರಾಟಕ್ಕೆ ನಾಲ್ಕು ತಿಂಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.