ಬೀದರ್: ರೈತರಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಫ್ರೂಟ್ ತಂತ್ರಾಂಶ ನೀಡಲಾಗಿದ್ದು, ರೈತರು ಈ ಪೋರ್ಟಲ್ ಬಗ್ಗೆ ಅರಿತು ಅನುಕೂಲತೆಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ.
ಫ್ರೂಟ್ ತಂತ್ರಾಂಶ ಕುರಿತಂತೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಬಳಿಕ ಜಿಲ್ಲಾಧಿಕಾರಿಗಳು ಕೃಷಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು.
ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ ಪೋರ್ಟಲ್ ನಲ್ಲಿ ತಮ್ಮ ಆಧಾರ್ ಸಂಖ್ಯೆಯನ್ನು ನೋಂದಣಿ ಮತ್ತು ನೋಂದಣಿ ಮಾಡಿಸಿಕೊಳ್ಳಬೇಕು. ರೈತರು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 10 ಕೊನೆಯ ದಿನವಾಗಿದೆ. ಈ ಅವಧಿಯೊಳಗೆ ರೈತರು ನೋಂದಣಿ ಮಾಡಿಕೊಳ್ಳದಿದ್ದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ದೊರಕುವ ಸೌಲಭ್ಯಗಳಾದ ಸಬ್ಸಿಡಿ ಬೀಜ, ಕನಿಷ್ಟ ಬೆಂಬಲ ಬೆಲೆ, ಹಾಲಿನ ಪ್ರೋತ್ಸಾಹ ಧನ ತಪ್ಪುವ ಸಂಭವವಿರುತ್ತದೆ ಎಂದು ಈ ಮೂಲಕ ತಿಳಿಸಲಾಗಿದೆ.