ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಈಗಾಗಲೇ 15ನೇ ಹಂತಗಳಲ್ಲಿ 63,119 ಫಲಾನುಭವಿಗಳಿಗೆ 44.01 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.
ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಮುಂಗಾರು ಹಂಗಾಮಿನ ಪ್ರವಾಹ ಅಥವಾ ಅಕಾಲಿಕ ಮಳೆ ಸಂದರ್ಭದಲ್ಲಿ ಬೆಳೆ ಹಾನಿಯಾಗಿರುವ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ 16, 17ನೇ ಹಂತದ 1,503 ರೈತರಿಗೆ 1.20 ಕೋಟಿ ರೂ.ಗಳ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದೆ.
ಅತೀ ಶೀಘ್ರದಲ್ಲಿ ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮಾ ಮಾಡಲಾಗುವುದು ಮತ್ತು ಬಾಕಿ ಉಳಿದ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದ್ದು, ಹಂತ ಹಂತವಾಗಿ ಪರಿಹಾರ ಧನವನ್ನು ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.