ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ಎರಡೂವರೆ ತಿಂಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಮುಂದುವರಿಸಿದ್ದಾರೆ.
ಸಂಸತ್ನಲ್ಲಿಯೂ ರೈತರ ಹೋರಾಟ ಪ್ರತಿದ್ವನಿಸಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಕುರಿತಾಗಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಗತ್ಯವಿದ್ದರೆ ಕೃಷಿ ಕಾಯ್ದೆ ತಿದ್ದುಪಡಿಗೆ ಸರಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ರೈತರೊಂದಿಗೆ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಮುಕ್ತವಾಗಿ ಚರ್ಚೆ ನಡೆಸುತ್ತೇವೆ. ಅಗತ್ಯವಾದರೆ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಾಗಿದೆ. ಕೆಲವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ರಾಜನಾಥ್ ಸಿಂಗ್, ಈಗ ಇರುವ ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ. ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಅಗತ್ಯವೆಂದರೆ ರೈತರೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಅವರೂ ಇದೇ ರೀತಿ ಹೇಳಿದ್ದು, ಅವರ ಮಾತುಗಳನ್ನೇ ರಾಜನಾಥ್ ಸಿಂಗ್ ಪುನರುಚ್ಛರಿಸಿದ್ದಾರೆ.