ಬೆಂಗಳೂರು: ಎಪಿಎಂಸಿಗಳಲ್ಲಿ ರೈತರಿಗೆ ಕಡಿಮೆ ದರದಲ್ಲಿ ಊಟ ಒದಗಿಸಲು ಕ್ಯಾಂಟೀನ್ ಗಳನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರ ಶೋಷಣೆ ತಪ್ಪಿಸಿ ಅನುಕೂಲ ಕಲ್ಪಿಸಲು ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ. ಇದರಿಂದ ರೈತರಿಗೆ ಹೆಚ್ಚಿನ ಸೌಲಭ್ಯ ಸಿಗಲಿದ್ದು, ವರ್ತಕರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಹಿಂದಿನ ಎಪಿಎಂಸಿ ಕಾಯ್ದೆ ರದ್ದುಪಡಿಸಿ 2020ರಲ್ಲಿ ಹೊಸ ಕಾಯ್ದೆ ಜಾರಿಗೊಳಿಸಿದ್ದು, ಇದಕ್ಕೆ ರೈತರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಹೊಸ ಕಾಯ್ದೆ ರದ್ದುಪಡಿಸುವುದಾಗಿ ಭರವಸೆ ನೀಡಿದ್ದು, ಅಂತೆಯೇ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ ಎಂದು ತಿಳಿಸಿದ್ದಾರೆ.