ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅಂಚೆ ಇಲಾಖೆ ವತಿಯಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಹಕರ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ಪೀಡ್ ಪೋಸ್ಟ್ ಗೆ ಸಂಬಂಧಿಸಿದಂತೆ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ಬೇಳೆ ಕಾಳು ಮತ್ತು ರೈತರಿಗೆ ಬೆತ್ತಲೆ ಬೀಜಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಶೀಘ್ರವೇ ಚಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಬೆಳೆಗಾರರಿಂದ ಗ್ರಾಹಕರಿಗೆ ನೇರವಾಗಿ 350 ಟನ್ ಮಾವಿನಹಣ್ಣು ಪಾರ್ಸೆಲ್ ತಲುಪಿಸಲಾಗಿದೆ. ಅಂಚೆ ಇಲಾಖೆಯ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.