ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿರುವ ಪರಿಣಾಮ ಹಿಂಗಾರು ಮಾರುತಗಳು ಚುರುಕುಗೊಂಡಿವೆ. ಇದರ ಪ್ರಭಾವ ರಾಜ್ಯದ ಮೇಲೆ ಉಂಟಾಗಿದ್ದು, ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯಾಗುತ್ತಿರುವ ಕಾರಣ ಚಳಿಯ ತೀವ್ರತೆ ಹೆಚ್ಚಾಗಿದೆ. ನ.ರ್ 4 ರಿಂದ 6ರವರೆಗೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ತುಂತುರು ಮಳೆಯಾಗಲಿದೆ.
ಮುಂಗಾರು ಹಂಗಾಮಿನ ಬೆಳೆಗಳ ಕಟಾವು ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮಳೆಯಾಗುತ್ತಿರುವುದರಿಂದ ಬೆಳೆ ಹಾಳಾಗತೊಡಗಿದೆ. ಮಳೆ ಹಾಗೂ ತೇವಾಂಶದಿಂದ ಕಟಾವಿಗೆ ಬಂದ ಮತ್ತು ಕಟಾವು ಮಾಡಿದ ಬೆಳೆಗಳು ಹಾಳಾಗುತ್ತಿದ್ದು, ರೈತರಿಗೆ ತೀವ್ರ ತೊಂದರೆಯಾಗಿದೆ.