ಚಿಕ್ಕಮಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಲು ಆಸಕ್ತಿ ಇಲ್ಲ. ರೈತರ ವಿಷಯದಲ್ಲಿ ರಾಜಕಾರಣ ಮಾಡುವುದರಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದೆ. ಈಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿದ ಹಣವನ್ನಾದರೂ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸಲಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 600ಕ್ಕೂ ಅಧಿಕ ಆತ್ಮಹತ್ಯೆ ಮಾಡಿಕೊಂಡಿರುವುದು ಸಾಮಾನ್ಯ ಸಂಗತಿಯಲ್ಲ. ರೈತರು ಸಂಕಷ್ಟಕ್ಕೊಳಗಾಗಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಸಂಕಷ್ಟಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.