ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಂಪ್ ಸೆಟ್ ಇದ್ದರೂ ಸಮರ್ಪಕ ವಿದ್ಯುತ್ ಇಲ್ಲದ ಕಾರಣ ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ.
ಮುಂಗಾರು ಮಳೆ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಈಗ ತ್ರೀ ಫೇಸ್ ವಿದ್ಯುತ್ ಇಲ್ಲದೇ ಪಂಪ್ ಸೆಟ್ ಇದ್ದರೂ ಬಳಕೆ ಮಾಡಿದಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಗೊಂಡಿದ್ದು, ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ವಿದ್ಯುತ್ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ.
ಇದರಿಂದಾಗಿ ಪಂಪ್ಸೆಟ್ ನಲ್ಲಿ ಬೆಳೆಗೆ ನೀರು ಹಾಯಿಸಲು ಮುಂದಾಗಿದ್ದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ನೀರು ಸಿಗದೇ ಬೆಳೆಗಳು ಒಣಗುತ್ತಿವೆ. ಖರ್ಚು ಮಾಡಿದ ಹಣ ಕೈಗೆ ಸಿಗದಂತಾಗಿ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಒಂದು ವಾರದಿಂದ ವಿದ್ಯುತ್ ಪೂರೈಕೆಯನ್ನು ಅನಿರ್ಧಿಷ್ಟವಾವಧಿ ಸ್ಥಗಿತಗೊಳಿಸಲಾಗಿದೆ. ತ್ರಿಫೇಸ್ ವಿದ್ಯುತ್ ಇದ್ದಕ್ಕಿದ್ದಂತೆ ನಿಲ್ಲಿಸುತ್ತಿದ್ದು, ತಾಂತ್ರಿಕ ಸಮಸ್ಯೆಯ ನೆಪ ಹೇಳಲಾಗುತ್ತಿದೆ. ತೆಂಗು, ಬಾಳೆ, ಅಡಿಕೆ, ಭತ್ತ ಸೇರಿದಂತೆ ಎಲ್ಲಾ ಬೆಳೆಗಳು ಒಣಗಲಾರಂಭಿಸಿದ್ದು, ಸಮರ್ಪಕ ತ್ರೀಫೇಸ್ ವಿದ್ಯುತ್ ಪೂರೈಕೆಗೆ ರೈತರು ಒತ್ತಾಯಿಸಿದ್ದಾರೆ.