alex Certify BREAKING : ಬೆಂಗಳೂರಲ್ಲಿ ಇಂದಿನಿಂದ 4 ದಿನ ‘ರೈತರ ಜಾತ್ರೆ’ : ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಇಂದಿನಿಂದ 4 ದಿನ ‘ರೈತರ ಜಾತ್ರೆ’ : ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ಬೆಂಗಳೂರಿನಲ್ಲಿ ಕೃಷಿ ಮೇಳ ನಡೆಯಲಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಇಂದಿನಿಂದ ನವೆಂಬರ್ 20ರವರೆಗೆ ಕೃಷಿ ಮೇಳ ನಡೆಯಲಿದ್ದು, ಕೃಷಿ ಮೇಳ ಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದಡಿ ನಡೆಯಲಿದೆ. ಈ ಬಾರಿ ಕೃಷಿ ಮೇಳದಲ್ಲಿ ಬಿತ್ತನೆ ಬೀಜಗಳ ಪ್ರದರ್ಶನದ ಜೊತೆಗೆ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಈ ಬಾರಿ ಕೃಷಿ ಮೇಳದಲ್ಲಿ ಬರ ಸ್ನೇಹಿ ಕೃಷಿ ತಂತ್ರಜ್ಞಾನಗಳು ಮತ್ತು ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ಕೃಷಿ ಮೇಳ ನೋಡಲು ಬರುವ ಜನರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಹೊರಗಿನಿಂದ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕೂಡ ಇದೆ. ಜಕ್ಕೂರೂ ಏರೋಡ್ರಮ್ಸ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕೃಷಿ ಮೇಳ 2023 ಆ್ಯಪ್ ಡೆವಲಪ್ ಮಾಡಲಾಗಿದೆ. ಯಾವ ಯಾವ ಮೇಳಗಳು ಎಲ್ಲಿದೆ ಎಂದು ಮಾಹಿತಿ ಆ್ಯಪ್ ಮೂಲಕ ದೊರೆಯಲಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...