ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರೊಂದಿಗೆ ಬರ ನಿರ್ವಹಣೆ ಕ್ರಮಗಳ ಬಗ್ಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಬೆಳೆ ವಿಮೆ ಪರಿಹಾರ ಸಮರ್ಪಕವಾಗಿ ಇತ್ಯರ್ಥಪಡಿಸಬೇಕು ಎಂದು ಹೇಳಿದ್ದಾರೆ.
ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಿದ್ದು, ಅವುಗಳನ್ನು ಸಂಸ್ಥೆವಾರು ಹಂಚಿಕೆ ಮಾಡುವ ವಿತರಿಸಲಾಗುತ್ತಿದೆ. ಸಾಕಷ್ಟು ಗೊಬ್ಬರ, ಬೀಜಗಳ ದಾಸ್ತಾನು ಇದ್ದು, ರೈತರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೊರತೆ ಅಥವಾ ಹೆಚ್ಚುವರಿ ಬೇಡಿಕೆ ಇದ್ದಲ್ಲಿ ತಕ್ಷಣವೇ ಕೃಷಿ ಆಯುಕ್ತರು, ನಿರ್ದೇಶಕರ ಗಮನಕ್ಕೆ ತರಬೇಕು ಎಂದು ಹೇಳಿದ್ದಾರೆ.