alex Certify ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರೊಂದಿಗೆ ಬರ ನಿರ್ವಹಣೆ ಕ್ರಮಗಳ ಬಗ್ಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಬೆಳೆ ವಿಮೆ ಪರಿಹಾರ ಸಮರ್ಪಕವಾಗಿ ಇತ್ಯರ್ಥಪಡಿಸಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಿದ್ದು, ಅವುಗಳನ್ನು ಸಂಸ್ಥೆವಾರು ಹಂಚಿಕೆ ಮಾಡುವ ವಿತರಿಸಲಾಗುತ್ತಿದೆ. ಸಾಕಷ್ಟು ಗೊಬ್ಬರ, ಬೀಜಗಳ ದಾಸ್ತಾನು ಇದ್ದು, ರೈತರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೊರತೆ ಅಥವಾ ಹೆಚ್ಚುವರಿ ಬೇಡಿಕೆ ಇದ್ದಲ್ಲಿ ತಕ್ಷಣವೇ ಕೃಷಿ ಆಯುಕ್ತರು, ನಿರ್ದೇಶಕರ ಗಮನಕ್ಕೆ ತರಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...