ಬೀದರ್: ಅತಿವೃಷ್ಟಿಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರಿಗೆ ಮತ್ತೊಂದು ಶಾಕ್ ಎದುರಾಗಿದೆ. ಜಿಲ್ಲೆಯಲ್ಲಿ ನೆಟೆ ರೋಗಕ್ಕೆ ಅಪಾರ ಪ್ರಮಾಣದ ತೊಗರಿ ಬೆಳೆ ನಾಶವಾಗಿದೆ.
10 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಬೆಳೆ ನಾಶವಾಗಿದೆ. ಬೆಳೆ ಹಾನಿ ಬಗ್ಗೆ ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾಹಿತಿ ನೀಡಿದ್ದಾರೆ. ಒಂದೂವರೆ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿತ್ತು. ಈ ಪೈಕಿ 10,000ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಗೀಡಾಗಿದೆ. ನೆಟೆ ರೋಗಕ್ಕೆ ತುತ್ತಾಗಿ ಅಪಾರ ಪ್ರಮಾಣದ ತೊಗರಿ ಬೆಳೆ ನಾಶವಾಗಿದೆ.
ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ತೊಗರಿ ಬೆಳೆ ನಾಶವಾಗಿರುವುದರಿಂದ ಬೀದರ್ ಜಿಲ್ಲೆಯ ರೈತರು ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.