ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ.
ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಈ ಹಿಂದೆ ವಿಧಿಸಿದ್ದ ಷರತ್ತುಗಳನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶ ಹೊರಡಿಸಿದ್ದು, ಇಂದಿನಿಂದ ರೈತರು ಐಡಿ ಜೊತೆಗೆ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.
ಪ್ರತಿ ಜಿಲ್ಲೆಯಲ್ಲೂ ರಾಗಿ ಖರೀದಿ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ. ಇಂದಿನಿಂದ ನೋಂದಣಿ ಕಾರ್ಯ ಆರಂಭವಾಗಲಿದ್ದು, 2024 ರ ಜ.1, ಮಾರ್ಚ್ 31 ರ ವರೆಗೆ ಖರೀದಿ ಕಾರ್ಯ ನಡೆಯಲಿದೆ. ಈ ಬಾರಿ ಪ್ರತಿ ಎಕರೆಗೆ 10 ಕ್ವಿಂಟಾಲ್ ರಾಗಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಣ್ಣ ಮತ್ತು ದೊಡ್ಡ ರೈತರು ಎನ್ನದೆ ಎಲ್ಲ ರೈತರಿಂದಲೂ ರಾಗಿ ಖರೀದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.