ನವದೆಹಲಿ: ರೈತರು ಹಾಗೂ ಕೃಷಿ ಕ್ಷೇತ್ರಕ್ಕೆ 2024-25ನೇ ಸಾಲಿನ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂಪಾಯಿ ಘೋಷಿಸಲಾಗಿದೆ. ಈ ನಿಧಿಯಿಂದ ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
5 ರಾಜ್ಯಗಳಲ್ಲಿ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರಲಿದೆ. ವರ್ಷದಲ್ಲಿ 1 ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ ಎಫ್ ಪಿಒ ಗಳನ್ನು ರಚಿಸಲಾಗುವುದು. ಕೃಷಿ ಭೂಮಿ ಹಾಗೂ ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು ನೀಡಲಾಗುವುದು.
ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣ ಒದಗಿಸಲಿದೆ. ಸೀಗಡಿ ಸಾಕಾನಿಕೆ ಹಾಗೂ ಮಾರುಕಟ್ಟಗೆ ಆರ್ಥಿಕ ನೆರವು ನೀಡಲಾಗುವುದು ಎಂದರು.