ಹಾವೇರಿ: ಭೂ ಪರಿವರ್ತನೆ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ನಡೆಸಿದ ಸಚಿವರು, ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದರು.
ಭೂ ಪರಿವರ್ತನೆ ಅತ್ಯಂತ ಕಠಿಣವಾಗಿದ್ದು, ವರ್ಷಗಟ್ಟಲೆ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಪರಿಹಾರ ತರುವ ಉದ್ದೇಶದಿಂದ ಭೂ ಪರಿವರ್ತನೆ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆ ಮಂಡಿಸಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
ಸರ್ಕಾರಿ ಜಮೀನು ಒತ್ತುವರಿ ಮಾಡಿದ ರೈತರ ಮೇಲೆ ಕೇಸ್ ಹಾಕಲಾಗುತ್ತಿತ್ತು. ಅದನ್ನು ತಡೆಯುವ ಉದ್ದೇಶದಿಂದ ಕಾನೂನು ಪಾಸ್ ಮಾಡಲಾಗಿದೆ ಎಂದು ಹೇಳಿದ್ದಾರೆ.