ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಇನ್ನು ಮುಂದೆ ರೈತರಿಂದ ಭೂ ಸ್ವಾಧೀನ ಮಾಡಿ ಜನರಿಗೆ ಸೈಟು, ಮನೆ ಹಂಚಿಕೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ರೈತರೇ 50 ಎಕರೆ ಅಥವಾ ಅದಕ್ಕಿಂತ ಹೆಚ್ಚು ಜಮೀನು ನೀಡಲು ಮುಂದಾದರೆ ಅವರ ಸಹಭಾಗಿತ್ವದಲ್ಲಿ ಬಡಾವಣೆ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡಲಾಗುವುದು. ಶೇ. 40 ರಷ್ಟು ಭೂಮಿಯನ್ನು ರೈತರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಗೃಹ ಮಂಡಳಿಯಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಸದಿರಲು ತೀರ್ಮಾನಿಸಲಾಗಿದೆ. ರೈತರೇ ಸಹಭಾಗಿತ್ವ ನೀಡಿದಲ್ಲಿ ಒಪ್ಪಂದ ಮಾಡಿಕೊಂಡು ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುವುದು. ತಾಲೂಕು ಮಟ್ಟದಲ್ಲಿ ಶೇಕಡ 40ರಷ್ಟು ಭೂಮಿಯನ್ನು ರೈತರಿಗೆ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಶೇಕಡ 50ರಷ್ಟು ಭೂಮಿ ನೀಡಲಾಗುವುದು ಎಂದು ತಿಳಿಸಿದ್ದಾರೆ.