alex Certify ಭಾರತ ಬಂದ್: ಎಲ್ಲ ಚಟುವಟಿಕೆಗಳಿಗೆ ಸಹಕಾರ ಕೊಡಲು ರೈತ ಮುಖಂಡರಿಗೆ ಸಿಎಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ ಬಂದ್: ಎಲ್ಲ ಚಟುವಟಿಕೆಗಳಿಗೆ ಸಹಕಾರ ಕೊಡಲು ರೈತ ಮುಖಂಡರಿಗೆ ಸಿಎಂ ಮನವಿ

ಬೆಳಗಾವಿ: ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಜನ, ರೈತರು ಸಮಸ್ಯೆ ಅನುಭವಿಸಿದ್ದಾರೆ. ಎಲ್ಲಾ ಚಟುವಟಿಕೆಗಳಿಗೆ ಧರಣಿನಿರತರು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಅವರು ಮಾತನಾಡಿ, 2019 -20 ರಲ್ಲಿ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ. ಆಗ ನಮ್ಮ ನಾಯಕರು ಪರಿಹಾರ ಕೊಡುವುದಾಗಿ ಹೇಳಿದ್ದರು. ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರೈತಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸಕ್ಕರೆ ಕಾರ್ಖಾನೆಗಳಿಂದ ಬರಬೇಕಿರುವ ಕಬ್ಬಿನ ಬಾಕಿ ಮೊತ್ತ, ನೆರೆ ಸಂತ್ರಸ್ತರ ಪರಿಹಾರವನ್ನು ತುರ್ತಾಗಿ ಕೊಡುವಂತೆ ಮನವಿ ಮಾಡಲಾಗಿದೆ. ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ರೈತ ಮುಖಂಡರು ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಸಿಎಂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...