ಬೆಂಗಳೂರು: ರೈತ ಯುವಕನನ್ನು ಮದುವೆಯಾಗುವ ಯುವತಿಗೆ ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಬಜೆಟ್ ಸಿದ್ಧತೆ ಸಂಬಂಧ ರೈತ ಸಂಘಟನೆಗಳ ಸುಮಾರು 200ಕ್ಕೂ ಅಧಿಕ ಪ್ರತಿನಿಧಿಗಳು, ಮುಖಂಡರೊಂದಿಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಭೆ ನಡೆಸಿದ್ದಾರೆ.
ಕೃಷಿಕರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. 45 ವರ್ಷಗಳಾದರೂ ರೈತರ ಮಕ್ಕಳಿಗೆ ಮದುವೆಯಾಗುತ್ತಿಲ್ಲ. ಹೀಗಾಗಿ ಕೃಷಿಗೂ ಆದ್ಯತೆ ಇಲ್ಲದಂತಾಗಿದೆ. ರೈತನ ಮದುವೆಯಾಗುವ ಹುಡುಗಿಗೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
ರೈತರ ಸಾಲ ಮನ್ನಾ ಮಾಡಬೇಕು. ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ರೈತ ಪರ ಬಜೆಟ್ ಮಂಡಿಸಬೇಕು ಎಂದು ಮನವಿ ಮಾಡಲಾಗಿದೆ.
ಬಡಗಲಪುರ ನಾಗೇಂದ್ರ, ಹೆಚ್.ಆರ್. ಬಸವರಾಜಪ್ಪ, ಚುಕ್ಕಿ ನಂಜುಂಡಸ್ವಾಮಿ ಮೊದಲಾದವರಿದ್ದರು.