alex Certify BIG NEWS: ನಾಳೆ ನಡೆಯಲಿದೆ ಇಂದು ನಡೆಯಬೇಕಿದ್ದ ರೈತರು –ಸರ್ಕಾರದ ಪ್ರತಿನಿಧಿಗಳ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ನಡೆಯಲಿದೆ ಇಂದು ನಡೆಯಬೇಕಿದ್ದ ರೈತರು –ಸರ್ಕಾರದ ಪ್ರತಿನಿಧಿಗಳ ಸಭೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಮುಂದೂಡಿಕೆಯಾಗಿದೆ.

10 ನೇ ಸುತ್ತಿನ ಸಂಧಾನ ಸಭೆಯನ್ನು ಇಂದು ನಿಗದಿಪಡಿಸಲಾಗಿತ್ತು. ಆದರೆ, ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ರೈತ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳ ಸಭೆ ನಡೆಯಲಿದೆ.

ಈ ಮೊದಲು 9 ಸಲ ಸಭೆ ನಡೆಸಲಾಗಿದ್ದರೂ, ಕೃಷಿ ಕಾಯ್ದೆ ಹಿಂಪಡೆಯಲು ಸರ್ಕಾರ ಒಪ್ಪದ ಕಾರಣ ರೈತರು ಪಟ್ಟು ಸಡಿಲಿಸಿಲ್ಲ. ಹೀಗಾಗಿ ಮತ್ತೊಮ್ಮೆ ಸಭೆ ನಿಗದಿ ಮಾಡಲಾಗಿದೆ. ಜನವರಿ 26 ರಂದು ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಪರೇಡ್ ನಡೆಸಲು ರೈತರು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...