ಬೆಳಗಾವಿ: ಹಾಲು ಉತ್ಪಾದಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರೋತ್ಸಾಹ ಧನ ಪಾವತಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಸದ್ಯಕ್ಕೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ. ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹಧನವನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸೆಪ್ಟಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಪಾಲಿನ ಒಟ್ಟು 339 ಕೋಟಿ ರೂ. ಪ್ರೋತ್ಸಾಹ ಧನ ಬಿಡುಗಡೆಗೆ ಬಾಕಿ ಇದ್ದು, ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರೋತ್ಸಾಹಧನ ಪಾವತಿಸಲು ಕ್ರಮ ವಹಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ.