ಬೆಂಗಳೂರು: ಇನ್ನೊಂದು ವಾರ ಇಲ್ಲವೇ, 10 ದಿನದಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಸುರೇಶ್ ಗೌಡ ಅವರು ವಿಷಯ ಪ್ರಸ್ತಾಪಿಸಿ ರಾಗಿ ಖರೀದಿಗೆ ರೈತರಿಂದ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಇನ್ನು ಖರೀದಿ ಕೇಂದ್ರ ಆರಂಭಿಸಿಲ್ಲ ಎಂದು ತಿಳಿಸಿದ್ದಾರೆ.
ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ರಾಗಿ ಖರೀದಿಗೆ 1,59,721 ರೈತರಿಂದ ನೋಂದಣಿ ಮಾಡಿಸಿಕೊಳ್ಳಲಾಗಿದ್ದು, ಖರೀದಿ ಪ್ರಕ್ರಿಯೆ ಆರಂಭವಾಗಬೇಕಿದೆ. ಕೇಂದ್ರ ಸರ್ಕಾರ ಮೂರು ಹೊಸ ಮಾನದಂಡ ಅಳವಡಿಕೆಗೆ ಸೂಚನೆ ನೀಡಿದ್ದು, ಮಾನದಂಡಗಳನ್ನು ಅಳವಡಿಸಿಕೊಂಡು ಒಂದು ವಾರ ಇಲ್ಲವೇ 10 ದಿನಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.