alex Certify ರಾಜ್ಯದ ರೈತರೇ ಗಮನಿಸಿ : ನ.30 ರೊಳಗೆ ತಪ್ಪದೇ ಈ ಕೆಲಸ ಮಾಡಲು ಸೂಚನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರೇ ಗಮನಿಸಿ : ನ.30 ರೊಳಗೆ ತಪ್ಪದೇ ಈ ಕೆಲಸ ಮಾಡಲು ಸೂಚನೆ.!

ರೈತರು 2024 ರ ಮುಂಗಾರು ಹಂಗಾಮಿನಲ್ಲಿ ಬೆಳೆದಂತಹ ಬೆಳೆಗಳ ವಿವರವನ್ನು ಪೋಟೋ ಸಹಿತ ಖಾಸಗಿ ಅವರಿಂದ ಈಗಾಗಲೇ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ.

ರೈತರು ಗೂಗಲ್ ಪ್ಲೇ ಸ್ಟೋರ್ನಲ್ಲಿ ಬೆಳೆ ದರ್ಶಕ್ 2024 ಅನ್ನು ಡೌನ್ಲೋಡ್ ಮಾಡಿಕೊಂಡು, ತಮ್ಮ ಪಹಣಿಯಲ್ಲಿ ಯಾವ ಬೆಳೆ ಬೆಳೆಯಲಾಗಿದೆ ಹಾಗೂ ಯಾವ ಬೆಳೆ ಹೆಸರು ನಮೂದಾಗಿದೆ ಎಂದು ತಿಳಿದುಕೊಳ್ಳಬಹುದು.

ಒಂದು ವೇಳೆ ತಾವು ಬೆಳೆದಿರುವ ಬೆಳೆಗೂ ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬೆಳೆಗೂ ವ್ಯತ್ಯಾಸವಿದ್ದಲ್ಲಿ ಅಥವಾ ಯಾವುದೇ ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ತಾವುಗಳು ಬೆಳೆ ಸಮೀಕ್ಷೆ ಆಪ್ ಮುಖಾಂತರ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ನವೆಂಬರ್, 30 ಕೊನೆಯ ದಿನವಾಗಿದೆ. ಯಾವುದೇ ಆಕ್ಷೇಪಣೆ ಮಾಡದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿ ಯಾವುದೇ ಬೆಳೆಯ ವಿವರ ನಮೂದಾಗುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಬೆಳೆ ವಿಮಾ ಯೋಜನೆಯಲ್ಲಿ ಪರಿಹಾರ ಬಂದಲ್ಲಿ ತಮಗೆ ತೊಂದರೆಯಾಗುತ್ತದೆ ಅಥವಾ ಯಾವುದೇ ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಸರ್ಕಾರದಿಂದ ಯಾವುದೇ ಪರಿಹಾರ ಧನ ಲಭ್ಯವಾಗುವುದಿಲ್ಲ ಎಂಬ ಅಂಶವನ್ನು ಎಲ್ಲಾ ರೈತ ಬಾಂಧವರ ಗಮನಕ್ಕೆ ತರಲಾಗಿದೆ. ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪ್ರವೀಣ್ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...