alex Certify ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ

ಧಾರವಾಡ: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಅಗಸ್ಟ್ 15 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ.

ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.

ಇ-ಕೆವೈಸಿಯನ್ನು ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್‍ಸೈಟ್‍ನಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‍ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ  ಓಟಿಪಿ ದಾಖಲಿಸಿ ಉಚಿತವಾಗಿ  ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.

ಇ-ಕೆವೈಸಿಯನ್ನು ಬಯೋಮೆಟ್ರಿಕ್ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, ರೂ.15 ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು, ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು  ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...