ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ.
ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳಿಗೆ ತಡೆ ನೀಡಿದ್ದು, ಸಮಿತಿ ರಚಿಸಿದೆ. ಆದರೆ, ರೈತರು ಹೋರಾಟವನ್ನು ಮುಂದುವರೆಸಿದ್ದಾರೆ. ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದ್ದು ಇದುವರೆಗಿನ ಹೋರಾಟದಲ್ಲಿ ಚಳಿ, ಅನಾರೋಗ್ಯ ಸೇರಿದಂತೆ ಹಲವು ಕಾರಣಗಳಿಂದ 50 ರೈತರು ಸಾವನ್ನಪ್ಪಿದ್ದಾರೆ.
ಹವಾಮಾನ ವೈಪರೀತ್ಯದ ನಡುವೆಯೂ 51 ದಿನಗಳಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಕಾಯ್ದೆಗಳನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ನಾಯಕರು ಹೇಳಿದ್ದು, ಇಂದು 9ನೇ ಸುತ್ತಿನ ಮಾತುಕತೆಗೆ ಸಮಯ ನಿಗದಿಯಾಗಿದೆ.
ಸರ್ಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ನಿವಾರಣೆಗೆ ಸುಪ್ರೀಂಕೋರ್ಟ್ ಸಮಿತಿಯನ್ನು ರಚಿಸಿದ್ದು, ಅನೇಕರು ಸಮಿತಿಯಿಂದ ಹೊರಬಂದಿದ್ದಾರೆ. ಇದರ ನಡುವೆಯೇ ಇವತ್ತು ಮಹತ್ವದ ಸಭೆ ನಡೆಯಲಿದೆ.