ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕಳೆದ ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಹಲವು ಸುತ್ತಿನ ಮಾತುಕತೆ ವಿಫಲವಾಗಿವೆ.
ಧರಣಿ ನಿರತ ರೈತರ ಜೊತೆಗೆ ನಾಳೆ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದೆ. ಕೇಂದ್ರ ಸರ್ಕಾರಕ್ಕೆ 40 ರೈತಸಂಘಟನೆಗಳು ಪತ್ರ ಬರೆದು ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ.
ಎಂ.ಎಸ್.ಪಿ. ಮುಂದುವರಿಕೆ ಬಗ್ಗೆ ಕಾನೂನಿನಡಿ ಭರವಸೆ ನೀಡಬೇಕು. ರೈತರ ವಿರುದ್ಧದ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ಕೃಷಿ ಕಾಯ್ದೆ ತಿದ್ದುಪಡಿ ಕೈಬಿಡಬೇಕೆಂಬುದು ಸೇರಿದಂತೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡಲಾಗಿದೆ.