ಮಂಡ್ಯ: ಪ್ರತಿಷ್ಠೆಗಾಗಿ ರೈತರು ಕಾವೇರಿ ಚಳುವಳಿ ನಡೆಸಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಗಣಿಗ ರವಿ ಕುಮಾರ್ ಹೇಳಿಕೆಗೆ ರೈತರು ಸಿಡಿದೆದ್ದಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಶಾಸಕ ಗಣಿಗ ರವಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ರೈತರ ಹೋರಾಟವನ್ನು ಅವಹೇಳನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಶಾಸಕ ಗಣಿಗ ರವಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ತಕ್ಷಣ ಶಾಸಕರು ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.