ನವದೆಹಲಿ: ಕೃಷಿ ಸಂಬಂಧಿತ ನೂತನ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಡಿಸೆಂಬರ್ 14 ರಿಂದ ರೈತರು ದೇಶವ್ಯಾಪಿ ಪ್ರತಿಭಟನೆ ಕೈಗೊಂಡಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ರೈತರು ತಿರಸ್ಕರಿಸಿದ್ದಾಎರೆ. ಈ ಮೂಲಕ ರೈತರೊಂದಿಗೆ ನಡೆದ 6ನೇ ಸುತ್ತಿನ ಮಾತುಕತೆಯೂ ರದ್ದಾಗಿದ್ದು ಬಿಕ್ಕಟ್ಟು ತಾರಕಕ್ಕೇರಿದೆ. 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಸರ್ಕಾರ ನಡೆಸಿದ ಯಾವ ಸಭೆಗಳಲ್ಲಿಯೂ ಯಾವುದೇ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿಲ್ಲ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಯ್ದೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದು, ಕಾಯ್ದೆಯಲ್ಲಿ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಆದರೆ, ಇದಕ್ಕೆ ರೈತ ಮುಖಂಡರು ಒಪ್ಪಿಗೆ ನೀಡಿಲ್ಲ. ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿ, ಹೋರಾಟ ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ.