ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅನ್ನದಾತರರು ಸಿಡಿದೆದ್ದಿದ್ದು, ಮೈಮೇಲೆ ಸಗಣಿ ಸುರಿದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಮನಳ್ಳಿ ಗೇಟ್ ಬಳಿ ನಡೆದಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಎತ್ತಿನ ಗಾಡಿಗಳ ಸಮೇತ ಆಗಮಿಸಿದ್ದು, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಸೋಮನಹಳ್ಳಿ ಗೇಟ್ ಬಳಿ ರೈತರನ್ನು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ.
ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. ಸ್ಥಳದಲ್ಲೇ ಧರಣಿ ನಡೆಸಿರುವ ರೈತರು ಮೈಮೇಲೆ ಸಗಣಿ ಸುರಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ರೈತರಿಗೆ ನೀಡುತ್ತಿರುವ ಕಿರುಕುಳದಿಂದ ಮುಕ್ತಿ ಕೊಡಬೇಕು, ರೈತರಿಗೆ ಸರ್ವಿಸ್ ರಸ್ತೆ ನೀಡಬೇಕು ಸೇರಿದಂತೆ ಹತ್ತಕ್ಕೂ ಹೆಚ್ಚು ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.