ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಮೂರು ಪಾಳಿಯಲ್ಲಿ ಪ್ರತಿದಿನ 5 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಬೆನ್ನಲ್ಲೇ ಕೃಷಿ ಪಂಪ್ಸೆಟ್ ಗಳಿಗೆ ಬೆಳಗ್ಗೆ, ಮಧ್ಯಾಹ್ನ, ಮಧ್ಯರಾತ್ರಿ ವಿದ್ಯುತ್ ಸರಬರಾಜು ಮಾಡಲು ಇಂಧನ ಸಚಿವ ಕೆ.ಜೆ. ಜಾರ್ಜ್ ಎಸ್ಕಾಂಗಳಿಗೆ ಸೂಚನೆ ನೀಡಿದ್ದಾರೆ.
ಮಧ್ಯರಾತ್ರಿ 12 ಗಂಟೆಯಿಂದ 5 ಗಂಟೆ, ಬೆಳಗ್ಗೆ 8:45 ರಿಂದ ಮಧ್ಯಾಹ್ನ 1:45, ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆ ನಡುವೆ ವಿದ್ಯುತ್ ಪೂರೈಕೆ ಮಾಡಲಾಗುವುದು. ರೊಟೇಶನ್ ಪದ್ಧತಿ ಅನುಸರಿಸಿ ವಿದ್ಯುತ್ ನೀಡಲಾಗುವುದು. ಯಾವ ಪ್ರದೇಶದಲ್ಲಿ ಯಾವ ಸಮಯದಲ್ಲಿ ವಿದ್ಯುತ್ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಪತ್ರಿಕೆ, ರೇಡಿಯೋ, ಮೊಬೈಲ್ ಎಸ್ಎಂಎಸ್ ಮೂಲಕ ರೈತರಿಗೆ ತಿಳಿಸಬೇಕು. ಪ್ರತಿದಿನ ಐದು ಗಂಟೆ 3ಫೇಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.