ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲಿಯೂ ರೈತರ ಕೃಷಿ ಪಂಪ್ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ತೆಲಂಗಾಣದಲ್ಲಿ ರೈತ ಬಂಧು ಯೋಜನೆಯಡಿ 24 ಗಂಟೆ ಉಚಿತ ವಿದ್ಯುತ್, ಪ್ರತಿ ವರ್ಷ ಎಕರೆಗೆ ರೂ.10,000 ಸಹಾಯಧನ ನೀಡಲಾಗುತ್ತಿದೆ. ರೈತರು ಅಕಾಲಿಕವಾಗಿ ನಿಧನ ಹೊಂದಿದಲ್ಲಿ ತಕ್ಷಣ 5 ಲಕ್ಷ ವಿಮೆ ಪರಿಹಾರ ಕಲ್ಪಿಸಲಾಗುತ್ತಿದೆ. ದಲಿತ ಬಂಧು ಯೋಜನೆಯಡಿ ದಲಿತ ಕುಟುಂಬದವರಿಗೆ ಸ್ವಯಂ ಉದ್ಯೋಗಕ್ಕೆ 10 ಲಕ್ಷ ರೂಪಾಯಿ ನೆರವು ನೀಡಲಾಗುತ್ತಿದೆ. ಈ ಅಂಶಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿಕೊಳ್ಳುವಂತೆ ಕೆ. ಚಂದ್ರಶೇಖರರಾವ್ ಸಲಹೆ ನೀಡಿದ್ದಾರೆ ಎಂದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪ್ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು. ರೈತ ಬಂಧು, ದಲಿತ ಬಂಧು ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.