
ಬೆಳಗಾವಿ: ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸರ್ಕಾರದಿಂದ ಮೂಲ ಸೌಕರ್ಯ ಕಲ್ಪಿಸಲಾಗುವುದು. ನೋಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಿನ ಪಂಪ್ ಸೆಟ್ ಗಳಿಗೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಮೂಲ ಸೌಕರ್ಯ ಕಲ್ಪಿಸಲಾಗುವುದು.
ವಿಧಾನ ಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
500 ಮೀಟರ್ ವ್ಯಾಪ್ತಿಯೊಳಗಿನ ಪಂಪ್ಸೆಟ್ ಗಳಿಗೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ. 500 ಮೀಟರ್ ನಿಂದ ದೂರ ಇರುವ ಪಂಪ್ಸೆಟ್ ಗಳಿಗೆ ಕೇಂದ್ರ ಸರ್ಕಾರದ ಶೇಕಡ 30ರಷ್ಟು, ರಾಜ್ಯ ಸರ್ಕಾರದ ಶೇಕಡ 50ರಷ್ಟು ಸಬ್ಸಿಡಿ ನೀಡಿ ಸೋಲಾರ್ ಪಂಪ್ಸೆಟ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 22ರ ನಂತರ ನೋಂದಾಯಿಸಲ್ಪಟ್ಟ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯಗಳನ್ನು ರೈತರು ಸ್ವಯಂ ಕಾರ್ಯನಿರ್ವಹಣೆಯಡಿ ತಾವೇ ಮಾಡಿಕೊಳ್ಳಬೇಕೆಂಬ ನಿಯಮವನ್ನು ಮಾರ್ಪಡಿಸಿ ಸರ್ಕಾರವೇ ಮೂಲ ಸೌಕರ್ಯ ಒದಗಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.