ಕಲಬುರಗಿ: ರೈತರು ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಇ-ಕೆವೈಸಿ ಕಾರ್ಯ ಪ್ರಮುಖವಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕೆ.ವೈ.ಸಿ ಕಾರ್ಯ ಪ್ರಮುಖವಾಗಿದೆ. ಜಿಲ್ಲೆಯಲ್ಲಿ ಡಿ.ಸಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಅವರ ಸಹಕಾರ ಪಡೆದು ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಹಿಂಗಾರು ಬೆಳೆಗೆ ಬೇಕಾದ ಬೀಜ, ರಸಗೊಬ್ಬರ ದಾಸ್ತಾನು ರಾಜ್ಯದಲ್ಲಿ ಸಾಕಷ್ಟಿದ್ದು, ಯಾವುದೇ ಕೊರತೆ ಇಲ್ಲ. ಜಂಟಿ ಕೃಷಿ ನಿರ್ದೇಶಕರು ಸ್ಥಳೀಯ ಶಾಸಕರ ಅಭಿಪ್ರಾಯ, ಸಕಹೆ ಪರಿಗಣಿಸಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ ಸಚಿವರು, ಇನ್ನು ಜಲಾನಯನ ಇಲಾಖೆಯ ಯೋಜನೆಗಳು ಕಾಲಮಿತಿಯಲ್ಲಿ ಅನುಷ್ಟಾನಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಬಾರಿಯ ಬರಗಾಲ ಒಂದು ರೀತಿಯ ಹಸಿ ಬರಗಾಲವಾಗಿದೆ. ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಬೆಳೆ ಬಿತ್ತನೆಯಾದರು ಇಳುವರಿ ತೀರಾ ಕಡಿಮೆ ಬರುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರದ ಅಧ್ಯಯನ ತಂಡ ಬರುವ ಮುನ್ನವೆ ಬೆಳೆ ಹಾನಿ ಸರ್ವೆ ಕಾರ್ಯ ಮುಗಿಸಿ ತಂಡಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಸಬೇಕು. ರೈತರಿಗೆ ನ್ಯಾಯುಯುತ ಪರಿಹಾರಕ್ಕೆ ಒದಗಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.