ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಕಡ್ಡಾಯವಾಗಿದೆ.
ಎಫ್‍ಐಡಿ ಮಾಡಿಸದ ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‍ಐಡಿ ಸಂಖ್ಯೆ ಪಡೆಯಬೇಕು.
ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತ ಬಾಂಧವರು ತಾವು ಹೊಂದಿರುವ ಎಲ್ಲಾ ಜಮೀನಿನ ಸರ್ವೆ ನಂಬರ್‍ನ ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.